ದೀಪವು ನಿನ್ನದೆ, ಗಾಳಿಯು ನಿನ್ನದೆ
ಆರದಿರಲಿ ಬೆಳಕು
ದೀಪವು ನಿನ್ನದೆ, ಗಾಳಿಯು ನಿನ್ನದೆ
ಆರದಿರಲಿ ಬೆಳಕು
ಕಡಲು ನಿನ್ನದೆ, ಹಡಗು ನಿನ್ನದೆ
ಮುಳುಗದಿರಲಿ ಬದುಕು
ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕು
ಬೆಟ್ಟವು ನಿನ್ನದೆ ಬಯಲು ನಿನ್ನದೆ
ಹಬ್ಬಿ ನಗಲಿ ಪ್ರೀತಿ
ಬೆಟ್ಟವು ನಿನ್ನದೆ ಬಯಲು ನಿನ್ನದೆ
ಹಬ್ಬಿ ನಗಲಿ ಪ್ರೀತಿ
ನೆರಳು ಬಿಸಿಲು ಎಲ್ಲವೂ ನಿನ್ನವೆ
ನೆರಳು ಬಿಸಿಲು ಎಲ್ಲವೂ ನಿನ್ನವೆ
ಇರಲಿ ಏಕರೀತಿ
ದೀಪವು ನಿನ್ನದೆ ಗಾಳಿಯು ನಿನ್ನದೆ
ಆಗೊಂದು ಸಿಡಿಲು ಈಗೊಂದು ಮುಗಿಲು
ನಿನಗೆ ಅಲಂಕಾರ
ಆಗೊಂದು ಸಿಡಿಲು ಈಗೊಂದು ಮುಗಿಲು
ನಿನಗೆ ಅಲಂಕಾರ
ಅಲ್ಲೊಂದು ಒಂದು ಹಕ್ಕಿ ಇಲ್ಲೊಂದು ಮುಗುಳು
ಅಲ್ಲೊಂದು ಒಂದು ಹಕ್ಕಿ ಇಲ್ಲೊಂದು ಮುಗುಳು
ನಿನಗೆ ನಮಸ್ಕಾರ
ದೀಪವು ನಿನ್ನದೆ ಗಾಳಿಯು ನಿನ್ನದೆ
ಆರದಿರಲಿ ಬೆಳಕು
ಅಲ್ಲಿ ರಣ ದುಂದುಭಿ... ಇಲ್ಲೊಂದು ವೀಣೆ...
ನಿನ್ನ ಪ್ರತಿಧ್ವನಿ
ಆ ಮಹಾಕಾವ್ಯ ಈ ಭಾವಗೀತೆ
ಆ ಮಹಾಕಾವ್ಯ ಈ ಭಾವಗೀತೆ ನಿನ್ನ ಪದಧ್ವನಿ
ಆರದಿರಲಿ ಬೆಳಕು
ದೀಪವು ನಿನ್ನದೆ, ಗಾಳಿಯು ನಿನ್ನದೆ
ಆರದಿರಲಿ ಬೆಳಕು
ಕಡಲು ನಿನ್ನದೆ, ಹಡಗು ನಿನ್ನದೆ
ಮುಳುಗದಿರಲಿ ಬದುಕು
Deepavu ninnade kannada lyrics
Deepavu ninnade gaaliyu ninnade lyrics
No comments:
Post a Comment
Write Something about PK Music