Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ NINNINDALE NINNINDALE LYRICS IN KANNADA


ಚಿತ್ರ: ಮಿಲನ

ಹೇ ಹೇ ಹೇ ಹಾ ಹಾ ಹಾ
ತನನಾನ ನನನಾನ ನನನಾನನ
ನಿನ್ನಿಂದಲೇ ನಿನ್ನಿಂದಲೇ  ಕನಸೊಂದು ಶುರುವಾಗಿದೆ 
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
ಈ ಎದೆಯಲ್ಲಿ ಸಿಹಿಯಾದ ಕೋಲಾಹಲಾ 
ನನ್ನೆದುರಲ್ಲೇ ನೀ ಹೀಗೆ ಬಂದಾಗಲೇ 
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ 
ನಾ ನಿಂತಲ್ಲೇ ಹಾಳಾದೆ ನಿನ್ನಿಂದಲೇ 
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ 
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ
♫♫♫♫♫♫♫♫♫♫♫♫♫♫
ಇರುಳಲ್ಲಿ ಜ್ವರದಂತೆ ಕಾಡಿ ಈಗಾ 
ಹಾಯಾಗಿ ನಿಂತಿರುವೆ ಸರಿ ಏನು   
ಬೇಕಂತಲೇ ಮಾಡಿ ಏನೋ ಮೋಡಿ
ಇನ್ನೆಲ್ಲೋ ನೋಡುವ ಪರಿ ಏನು
ಈ ಮಾಯೆಗೆ ಈ ಮರುಳಿಗೆ 
ನಿನ್ನಿಂದ ಕಳೆ ಬಂದಿದೆ 
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ 
♫♫♫♫♫♫♫♫♫♫♫♫♫♫
ಹೋದಲ್ಲಿ ಬಂದಲ್ಲಿ ಎಲ್ಲಾ  ನಿನ್ನ 
ಸೊಂಪಾದ ಚೆಲುವಿನ ಗುಣಗಾನ
ಕೇದಿಗೆ ಗರಿಯಂಥ ನಿನ್ನ ನೋಟಾ  
ನನಗೇನೋ ಅಂದಂತೆ ಅನುಮಾನ 
ಕಣ್ಣಿಂದಲೇ ಸದ್ದಿಲ್ಲದೆ ಮುದ್ದಾದ ಕರೆ ಬಂದಿದೆ 
ನಿನ್ನಿಂದಲೇ ನಿನ್ನಿಂದಲೇ 
ಕನಸೊಂದು ಶುರುವಾಗಿದೆ 
ಈ ಎದೆಯಲ್ಲಿ ಸಿಹಿಯಾದ ಕೋಲಾಹಲಾ 
ನನ್ನೆದುರಲ್ಲೇ ನೀ ಹೀಗೆ ಬಂದಾಗಲೇ 
ನಿನ್ನ ತುಟಿಯಲ್ಲಿ ನಗುವಾಗುವ ಹಂಬಲ 
ನಾ ನಿಂತಲ್ಲೇ ಹಾಳಾದೆ ನಿನ್ನಿಂದಲೇ
ನಿನ್ನಿಂದಲೇ ನಿನ್ನಿಂದಲೇ ಕನಸೊಂದು ಶುರುವಾಗಿದೆ 
ನಿನ್ನಿಂದಲೇ ನಿನ್ನಿಂದಲೇ ಮನಸಿಂದು ಕುಣಿದಾಡಿದೆ

No comments:

Post a Comment

Write Something about PK Music

new1

new2

new5