Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

Aadisi nodu beelisi nodu Lyrics in kannada | ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು


ಚಿತ್ರ: ಕಸ್ತೂರಿ ನಿವಾಸ 

ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಏನೇ ಬರಲಿ ಯಾರಿಗೂ ಎಂದು ತಲೆಯ ಬಾಗದು
ಎಂದಿಗೂ ನಾನು ಹೀಗೆ ಇರುವೆ ಎಂದು ನಗುವುದು
ಹೀಗೆ ನಗುತಲಿರುವುದು  
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
♬♬♬♬♬♬♬♬♬♬♬♬♬♬♬♬♬♬
ಗುಡಿಸಲೇ ಆಗಲಿ,ಅರಮನೆ ಆಗಲಿ ಆಟ ನಿಲ್ಲದು
ಹಿರಿಯರೇ ಇರಲಿ ಕಿರಿಯರೆ ಬರಲಿ ಭೇದ ತೋರದು
ಕಷ್ಟವೋ ಸುಖವೋ ಅಳುಕದೆ ಆಡಿ ತೂಗುತಿರುವುದು ತೂಗುತಿರುವುದು
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
♬♬♬♬♬♬♬♬♬♬♬♬♬♬♬♬♬♬
ಮೈಯನೆ ಹಿಂಡಿ ನೊಂದರು ಕಬ್ಬು ಸಿಹಿಯ ಕೊಡುವುದು
ತೇಯುತಲಿದ್ದರು ಗಂಧದ ಪರಿಮಳ ತುಂಬಿ ಬರುವುದು
ತಾನೇ ಉರಿದರು ದೀಪವು ಮನೆಗೆ ಬೆಳಕ ತರುವುದು
ದೀಪ ಬೆಳಕ ತರುವುದು
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಆಡಿಸುವಾತನ ಕೈ ಚಳಕದಲಿ ಎಲ್ಲಾ ಅಡಗಿದೆ
ಆತನ ಕರುಣೆಯ ಜೀವವ ತುಂಬಿ ಕುಣಿಸಿ ನಲಿಸಿದೆ
ಆ ಕೈ ಸೋತರೆ ಬೊಂಬೆಯ ಕಥೆಯು ಕೊನೆಯಾಗುವುದೇ ಕೊನೆಯಾಗುವುದೇ
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು
ಏನೇ ಬರಲಿ ಯಾರಿಗೂ ಎಂದು ತಲೆಯ ಬಾಗದು
ಎಂದಿಗೂ ನಾನು ಹೀಗೆ ಇರುವೆ ಎಂದು ನಗುವುದು
ಹೀಗೆ ನಗುತಲಿರುವುದು  
ಆಡಿಸಿ ನೋಡು ಬೀಳಿಸಿ ನೋಡು ಉರುಳಿ ಹೋಗದು

Aadisi nodu Beelisi Nodu Karaoke 


No comments:

Post a Comment

Write Something about PK Music

new1

new2

new5