Song: Akashada neeliyalli
Lyrics: G.S. Shivarudrappa
Music/Singer: C Ashwath
Lyrics: G.S. Shivarudrappa
Music/Singer: C Ashwath
ಆಕಾಶದ ನೀಲಿಯಲ್ಲಿ, ಚಂದ್ರ ತಾರೆ ತೊಟ್ಟಿಲಲ್ಲಿ
ಆಕಾಶದ ನೀಲಿಯಲ್ಲಿ, ಚಂದ್ರ ತಾರೆ ತೊಟ್ಟಿಲಲ್ಲಿ
ಬೆಳಕನಿಟ್ಟು ತೂಗಿದಾಕೆ, ಬೆಳಕನಿಟ್ಟು ತೂಗಿದಾಕೆ
ನಿನಗೆ ಬೇರೆ ಹೆಸರು ಬೇಕೆ, ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೆ ಸಾಕೆ, ಸ್ತ್ರೀ ಎಂದರೆ ಅಷ್ಟೆ ಸಾಕೆ
ಹಸಿರ ಉಟ್ಟ ಬೆಟ್ಟಗಳಲಿ ಮೊಲೆ ಹಾಲಿನ ಹೊಳೆಯ ಇಳಿಸಿ

ಬಯಲ ಹಸಿರ ನಗಿಸಿದಾಕೆ, ಬಯಲ ಹಸಿರ ನಗಿಸಿದಾಕೆ
ನಿನಗೆ ಬೇರೆ ಹೆಸರು ಬೇಕೆ, ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೆ ಸಾಕೆ, ಸ್ತ್ರೀ ಎಂದರೆ ಅಷ್ಟೆ ಸಾಕೆ
ಮರಗಿಡ ಹೂ ಮುಂಗುರುಳನು ತಂಗಾಳಿಯ ಬೆರಳೂ ಸವರಿ
ಮರಗಿಡ ಹೂ ಮುಂಗುರುಳನು ತಂಗಾಳಿಯ ಬೆರಳೂ ಸವರಿ
ಹಕ್ಕಿ ಗಿಲಕಿ ಹಿಡಿಸಿದಾಕೆ, ಹಕ್ಕಿ ಗಿಲಕಿ ಹಿಡಿಸಿದಾಕೆ
ನಿನಗೆ ಬೇರೆ ಹೆಸರು ಬೇಕೆ, ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೆ ಸಾಕೆ, ಸ್ತ್ರೀ ಎಂದರೆ ಅಷ್ಟೆ ಸಾಕೆ
ಮನೆಮನೆಯಲಿ ದೀಪ ಮುಡಿಸಿ, ಹೊತ್ತು ಹೊತ್ತಿಗೆ ಅನ್ನ ಉಣಿಸಿ

ತಂದೆ ಮಗುವ ತಬ್ಬಿದಾಕೆ, ತಂದೆ ಮಗುವ ತಬ್ಬಿದಾಕೆ
ನಿನಗೆ ಬೇರೆ ಹೆಸರು ಬೇಕೆ, ನಿನಗೆ ಬೇರೆ ಹೆಸರು ಬೇಕೆ
ಸ್ತ್ರೀ ಎಂದರೆ ಅಷ್ಟೆ ಸಾಕೆ, ಸ್ತ್ರೀ ಎಂದರೆ ಅಷ್ಟೆ ಸಾಕೆ
No comments:
Post a Comment
Write Something about PK Music