Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

Baa illi sambhavisu Lyrics C Ashwath Lyrics in kannada | ಇಲ್ಲಿ ಬಾ ಸಂಭವಿಸು ಇಂದೆನ್ನ ಹೃದಯದಲಿ


ಸಂಗೀತ/ ಗಾಯನ- ಸಿ ಅಶ್ವಥ್

ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ       
ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ
ನಿತ್ಯವೂ ಅವತರಿಪ ಸತ್ಯಾವತಾರ
ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ
ನಿತ್ಯವೂ ಅವತರಿಪ ಸತ್ಯಾವತಾರ
ಮಣ್ಣಾಗಿ ಮರವಾಗಿ ಮಿಗವಾಗಿ ಖಗವಾಗಿ
ಮಣ್ಣಾಗಿ ಮರವಾಗಿ ಮಿಗವಾಗಿ ಖಗವಾಗಿ
ಭವಭವದಿ ಭವಿಸಿ ಹೇ……….. ಭವವಿದೂರ
ನಿತ್ಯವೂ ಅವತರಿಪ ಸತ್ಯಾವತಾರ
ನಿತ್ಯವೂ ಅವತರಿಪ ಸತ್ಯಾವತಾರ
ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ
ನಿತ್ಯವೂ ಅವತರಿಪ ಸತ್ಯಾವತಾರ

ಮಣ್ತನಕೆ ಮರತನಕೆ ಮಿಗತನಕೆ ಖಗತನಕೆ
ಮಣ್ತನಕೆ ಮರತನಕೆ ಮಿಗತನಕೆ ಖಗತನಕೆ
ಮುನ್ನಡೆಗೆ ಕಣ್ಣಾದ ಗುರುವೆ ಬಾರ
ಮೂಡಿ ಬಂದೆನ್ನ ನರರೂಪ ಚೇತನದಿ ಹೇ………..
ಮೂಡಿ ಬಂದೆನ್ನ ನರರೂಪ ಚೇತನದಿ
ನಾರಾಯಣತ್ವಕ್ಕೆ ದಾರಿ ತೋರ
ನಿತ್ಯವೂ ಅವತರಿಪ ಸತ್ಯಾವತಾರ
ಬಾ ಇಲ್ಲಿ ಸಂಭವಿಸು ಇಂದೆನ್ನ ಹೃದಯದಲಿ
ನಿತ್ಯವೂ ಅವತರಿಪ ಸತ್ಯಾವತಾರ

ಅಂದು ಅರಮನೆಯಲ್ಲಿ ಮತ್ತೆ ಸೆರೆಮನೆಯಲ್ಲಿ
ಅಲ್ಲಿ ತುರುಪಟ್ಟಿಯಲಿ ಇಲ್ಲಿ ಕಿರುಗುಡಿಸಲಲಿ
ಅಂದು ಅರಮನೆಯಲ್ಲಿ ಮತ್ತೆ ಸೆರೆಮನೆಯಲ್ಲಿ
ಅಲ್ಲಿ ತುರುಪಟ್ಟಿಯಲಿ ಇಲ್ಲಿ ಕಿರುಗುಡಿಸಲಲಿ
ದೇಶದೇಶದಿ ವೇಷವೇಷಾಂತರವನಾಂತು
ವಿಶ್ವಸಾರಥಿಯಾಗಿ ಲೀಲಾರಥವನೆಂತು
ಚೋದಿಸಿರುವೆಯೊ ಅಂತೆ ಸೃಷ್ಟಿಲೋಲ…………. ಹೇ
ಚೋದಿಸಿರುವೆಯೊ ಅಂತೆ ಸೃಷ್ಟಿಲೋಲ
ಅವತರಿಸು ಬಾ ಹೇ ಅವತರಿಸು ಬಾ ಅವತರಿಸು ಬಾ ಇಲ್ಲಿ
ಇಂದೆನ್ನ ಚೈತ್ಯದಲಿ ಹೇ ದಿವ್ಯ ಸಚ್ಚಿದಾನಂದ ಶೀಲ
ಹೇ ದಿವ್ಯ ಸಚ್ಚಿದಾನಂದ ಶೀಲ, ಹೇ ದಿವ್ಯ ಸಚ್ಚಿದಾನಂದ ಶೀಲ
ಹೇ ದಿವ್ಯ ಸಚ್ಚಿದಾನಂದ ಶೀಲ, ಹೇ ದಿವ್ಯ ಸಚ್ಚಿದಾನಂದ ಶೀಲ


Ba elli sambavisu Lyrics in Kannada
Baa elli sambhavisu Song Lyrics

No comments:

Post a Comment

Write Something about PK Music

new1

new2

new5