Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

ಎಲ್ಲೋ ಹುಡುಕಿದೆ - Ello hudukide illada devara Lyrics in Kannada ಎಲ್ಲೋ ಹುಡುಕಿದೆ ಇಲ್ಲದ ದೇವರ

ಸಾಹಿತ್ಯ: ಜಿ. ಎಸ್. ಶಿವರುದ್ರಪ್ಪ
ಗಾಯನ: ಸಿ. ಅಶ್ವಥ್

ಎಲ್ಲೋ ಹುಡುಕಿದೆ ಇಲ್ಲದ ದೇವರ ಕಲ್ಲು ಮಣ್ಣುಗಳ ಗುಡಿಯೊಳಗೆ

ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಇಲ್ಲೇ ಇರುವ ಪ್ರೀತಿ ಸ್ನೇಹಗಳ ಗುರುತಿಸದಾದೆನು ನಮ್ಮೊಳಗೆ

ಎಲ್ಲಿದೆ ನಂದನ ಎಲ್ಲಿದೆ ಬಂಧನ ಎಲ್ಲಾ ಇದೆ ನಮ್ಮೊಳಗೆ

ಒಳಗಿನ ತಿಳಿಯನು ಕಲಕದೆ ಇದ್ದರೆ ಏ
ಒಳಗಿನ ತಿಳಿಯನು ಕಲಕದೆ ಇದ್ದರೆ ಅಮೃತದ ಸವಿಯಿದೆ ನಾಲಿಗೆಗೆ
ಅಮೃತದ ಸವಿಯಿದೆ ನಾಲಿಗೆಗೆ

ಎಲ್ಲೋ ಹುಡುಕಿದೆ ಇಲ್ಲದ ದೇವರ ಕಲ್ಲು ಮಣ್ಣುಗಳ ಗುಡಿಯೊಳಗೆ

ಹತ್ತಿರವಿದ್ದೂ ದೂರ ನಿಲ್ಲುವೆವು ನಮ್ಮ  ಅಹಮ್ಮಿನ ಕೋಟೆಯಲಿ

ಎಷ್ಟು ಕಷ್ಟವೋ ಹೊಂದಿಕೆಯೆಂಬುದು ಅಅಅಅಅಅಅಅ
ಎಷ್ಟು ಕಷ್ಟವೋ ಹೊಂದಿಕೆಯೆಂಬುದು ನಾಲ್ಕುದಿನದ ಬದುಕಿನಲಿ
ನಾಲ್ಕುದಿನದ ಬದುಕಿನಲಿ

ಎಲ್ಲೋ ಹುಡುಕಿದೆ ಇಲ್ಲದ ದೇವರ ಕಲ್ಲು ಮಣ್ಣುಗಳ ಗುಡಿಯೊಳಗೆ
ಎಲ್ಲೋ ಹುಡುಕಿದೆ ಇಲ್ಲದ ದೇವರ ಕಲ್ಲು ಮಣ್ಣುಗಳ ಗುಡಿಯೊಳಗೆ
ಇಲ್ಲೇ ಇರುವ ಪ್ರೀತಿ ಸ್ನೇಹಗಳ
ಇಲ್ಲೇ ಇರುವ ಪ್ರೀತಿ ಸ್ನೇಹಗಳ ಗುರುತಿಸದಾದೆನು ನಮ್ಮೊಳಗೆ
ಎಲ್ಲೋ ಹುಡುಕಿದೆ ಇಲ್ಲದ ದೇವರ ಕಲ್ಲು ಮಣ್ಣುಗಳ ಗುಡಿಯೊಳಗೆ

No comments:

Post a Comment

Write Something about PK Music

new1

new2

new5