Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

BANGAARA NEERA LYRICS - C ASHWATH SONGS LYRICS - ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ - HOSA DWEEPAGALIGE

Song: Bangaara Neera
Singer:C.Ashwath
Music Director: C.Ashwath
Lyricist: Da.Ra.Bendre
Music Label : Lahari Music

ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಅಂದದೋ ಅಂದದ..
ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಅಂದದೋ ಅಂದದ.. ಅಂದದೋ ಅಂದದ..


ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ
ಮಿಂಚು ಬಳಗ ತೆರೆತೆರೆಗಳಾಗಿ ಅಲೆಯುವುದು ಪುಟ್ಟ ಪೂರ
ಅದು ನಮ್ಮ ಊರು ಇದು ನಿಮ್ಮ ಊರು
ತಮ್ ತಮ್ಮ ಊರೋ ಧೀರ
ಅದರೊಳಗೆ ನಾವು ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರ

ಕರೆ ಬಂದಿತಣ್ಣ ತೆರೆ ಬಂದಿತಣ್ಣ ನೆರೆ ಬಂದಿತಣ್ಣ ಬಳಿಗೆ
ಹರಿತದ ಭಾವ ಬೆರಿತದ ಜೀವ ಅದರೊಳಗೆ ಒಳಗೆ ಒಳಗೆ
ಕರೆ ಬಂದಿತಣ್ಣ ತೆರೆ ಬಂದಿತಣ್ಣ ನೆರೆ ಬಂದಿತಣ್ಣ ಬಳಿಗೆ
ಹರಿತದ ಭಾವ ಬೆರಿತದ ಜೀವ ಅದರೊಳಗೆ ಒಳಗೆ ಒಳಗೆ
ಇದೆ ಸಮಯವಣ್ಣ ಇದೆ ಸಮಯ ತಮ್ಮ ನಮ್ ನಿಮ್ಮ ಆತ್ಮಗಳಿಗೆ
ಅಂಬಿಗನು ಬಂದ ನಂಬಿಗನು ಬಂದ ಬಂದದ ದಿವ್ಯ ಘಳಿಗೆ

ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ

ಇದು ಉಪ್ಪು ನೀರ ಕಡಲಲ್ಲೋ ನಮ್ಮ ಒಡಲಲ್ಲು ಇದರ ನೆಲೆಯು
ಕಂಡವರಿಗಲ್ಲೊ ಕಂಡವರಿಗಷ್ಟೇ ತಿಳಿದದಾ ಇದರ ಬೆಲೆಯು
ಇದು ಉಪ್ಪು ನೀರ ಕಡಲಲ್ಲೋ ನಮ್ಮ ಒಡಲಲ್ಲು ಇದರ ನೆಲೆಯು
ಕಂಡವರಿಗಲ್ಲೊ ಕಂಡವರಿಗಷ್ಟೇ ತಿಳಿದದಾ ಇದರ ಬೆಲೆಯು
ಸಿಕ್ಕಲ್ಲಿ ಅಲ್ಲ ಸಿಕ್ಕಲ್ಲೆ ಮಾತ್ರ ಒಡೆಯುವುದು ಇದರ ಸೆಲೆಯು
ಕಣ್ ಅರಳಿದಾಗ ಕಣ್ ಹೊರಳಿದಾಗ ಹೊಳೆಯುವುದು ಇದರ ಕಳೆಯು

ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರ

ಬಂದವರ ಬಳಿಗೆ ಬಂದದ ಮತ್ತು ನಿಂದವರ ನೆರೆಗೂ
ಬಂದದೋ.. ಬಂದದ..
ನವ ಮನು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಅಂದದೋ.. ಅಂದದ..
ನವ ಮನು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಅಂದದೋ.. ಅಂದದ.. ಅಂದದೋ.. ಅಂದದ..
ಅಂದದೋ.. ಅಂದದ..
ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಅಂದದೋ ಅಂದದ..
ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಅಂದದೋ ಅಂದದ.. ಅಂದದೋ ಅಂದದ..
ಅಂದದೋ.. ಅಂದದ.. ಅಂದದೋ.. ಅಂದದ..

No comments:

Post a Comment

Write Something about PK Music

new1

new2

new5