Song: Shanubhogara Magalu
Literature - K.S. Narasimha Swamy
Music - C Ashwath
Singing – G. V Atri
ಶಾನು ಭೋಗರ ಮಗಳು ತಾಯಿಯಿಲ್ಲದ ಹುಡುಗಿ
ರತ್ನದಂತಹ ಹುಡುಗಿ ಊರಿಗೆಲ್ಲ
ಬಲು ಜಾಣೆ ಗಂಭೀರೆ ಹೆಸರು ಸೀತಾದೇವಿ
ಹನ್ನೆರಡು ತುಂಬಿಹುದು ಮದುವೆಯಿಲ್ಲ
ಶಾನು ಭೋಗರ ಮಗಳು ತಾಯಿಯಿಲ್ಲದ ಹುಡುಗಿ
ರತ್ನದಂತಹ ಹುಡುಗಿ ಊರಿಗೆಲ್ಲ
ಬಲು ಜಾಣೆ ಗಂಭೀರೆ ಹೆಸರು ಸೀತಾದೇವಿ
ಹನ್ನೆರಡು ತುಂಬಿಹುದು ಮದುವೆಯಿಲ್ಲ
ತಾಯಿಯಿಲ್ಲದ ಹೆಣ್ಣು ಮಿಂಚ ಬೀರುವ ಕಣ್ಣು
ಒಮ್ಮೊಮ್ಮೆ ಕಣ್ಣೀರ ಸರಸಿಯಹುದು
ತಾಯಿಯಿಲ್ಲದ ಹೆಣ್ಣು ಮಿಂಚ ಬೀರುವ ಕಣ್ಣು
ಒಮ್ಮೊಮ್ಮೆ ಕಣ್ಣೀರ ಸರಸಿಯಹುದು
ತಾಯಿಯಂದದಿ ಬಂದು ತಂಪ ನೆರೆಯುವುದೆಂದು
ಇಂಥ
ಬಾಳಿಗೆ ಒಲವೆ ನಿನ್ನ ಕನಸು
ತಾಯಿಯಂದದಿ ಬಂದು ತಂಪ ನೆರೆಯುವುದೆಂದು
ಇಂಥ
ಬಾಳಿಗೆ ಒಲವೆ ನಿನ್ನ ಕನಸು
ಹತ್ತಿರದ ಕೆರೆಯಿಂದ ತೊಳೆದ ಬಿ೦ದಿಗೆಯೊಳಗೆ
ನೀರ
ತರುವಾಗವಳ ನೋಡಬೇಕು
ಹತ್ತಿರದ ಕೆರೆಯಿಂದ ತೊಳೆದ ಬಿ೦ದಿಗೆಯೊಳಗೆ
ನೀರ
ತರುವಾಗವಳ ನೋಡಬೇಕು
ಕರುವನಾಡಿಸುವಾಗ ಮಲ್ಲಿಗೆಯ ಬನದೊಳಗೆ
ಅವಳ
ಗಂಡನ ಹೆಸರ ಕೇಳಬೇಕು
ಕರುವನಾಡಿಸುವಾಗ ಮಲ್ಲಿಗೆಯ ಬನದೊಳಗೆ
ಅವಳ
ಗಂಡನ ಹೆಸರ ಕೇಳಬೇಕು
ಮೊನ್ನೆ ತಾವರೆಗೆರೆಯ ಜೋಯಿಸರ ಮೊಮ್ಮಗನು
ಹೆಣ್ಣ ನೋಡಲು ಬಂದ ಅವರ ಮನೆಗೆ
ಮೊನ್ನೆ ತಾವರೆಗೆರೆಯ ಜೋಯಿಸರ ಮೊಮ್ಮಗನು
ಹೆಣ್ಣ ನೋಡಲು ಬಂದ ಅವರ ಮನೆಗೆ
ವೈದಿಕರ ಮನೆಗಳಲಿ ಊಟ ಹೊತ್ತಾಗುವುದು
ಒಲ್ಲೆನೆಂದಳು ಸೀತೆ ಕೋಣೆಯೊಳಗೆ
ವೈದಿಕರ ಮನೆಗಳಲಿ ಊಟ ಹೊತ್ತಾಗುವುದು
ಒಲ್ಲೆನೆಂದಳು ಸೀತೆ ಕೋಣೆಯೊಳಗೆ
ಮಗಳ
ಮಾತನು ಕೇಳಿ ನಕ್ಕುಬಿಟ್ಟರು ತಂದೆ
ಒಳಗೆ ನಂದಾದೀಪ ನಂದಿ ಹೋಗಿ
ಮಗಳ
ಮಾತನು ಕೇಳಿ ನಕ್ಕುಬಿಟ್ಟರು ತಂದೆ
ಒಳಗೆ ನಂದಾದೀಪ ನಂದಿ ಹೋಗಿ
ಫಲವ
ನುಡಿದುದು ಹಲ್ಲಿ ಹೇಳಲೇನಿದೆ ಮುಂದೆ
ತೆರಳಿದನು ಜೋಯಿಸನು ತಣ್ಣಗಾಗಿ
ಫಲವ
ನುಡಿದುದು ಹಲ್ಲಿ ಹೇಳಲೇನಿದೆ ಮುಂದೆ
ತೆರಳಿದನು ಜೋಯಿಸನು ತಣ್ಣಗಾಗಿ
ಬೆಳಗಾಗ ಕೆರೆಯ ಬಳಿ ನನ್ನ ತಂಗಿಯ ಕಂಡು
ಕನ್ನೆ ತೋರಿದಳಂತೆ ಕಾರಣವನು
ಬೆಳಗಾಗ ಕೆರೆಯ ಬಳಿ ನನ್ನ ತಂಗಿಯ ಕಂಡು
ಕನ್ನೆ ತೋರಿದಳಂತೆ ಕಾರಣವನು
ಹೊನ್ನೂರ ಕೇರಿಯಲಿ ಬಂದಿದ್ದ ಹೊಸ ಗಂಡು
ತನ್ನ ಕೂದಲಿಗಿಂತ ಕಪ್ಪು ಎಂದು
ಹೊನ್ನೂರ ಕೇರಿಯಲಿ ಬಂದಿದ್ದ ಹೊಸ ಗಂಡು
ತನ್ನ ಕೂದಲಿಗಿಂತ ಕಪ್ಪು ಎಂದು
ನಮ್ಮೂರಿನಕ್ಕರೆಯ ಸಕ್ಕರೆಯ ಬೊ೦ಬೆಯನು
ನೋಡಬೇಕೆ ಇಂಥ ಕಪ್ಪು ಗಂಡು
ನಮ್ಮೂರಿನಕ್ಕರೆಯ ಸಕ್ಕರೆಯ ಬೊ೦ಬೆಯನು
ನೋಡಬೇಕೆ ಇಂಥ ಕಪ್ಪು ಗಂಡು
ಶಾನುಭೋಗರ ಮನೆಯ ತೋರಣವೆ ಹೇಳುವುದು
ಬಂದ
ದಾರಿಗೆ ಸುಂಕವಿಲ್ಲವೆಂದು
ಬಂದ
ದಾರಿಗೆ ಸುಂಕವಿಲ್ಲವೆಂದು
ಶಾನುಭೋಗರ ಮಗಳು ರತ್ನದಂತಹ ಹುಡುಗಿ
ಗಂಡು ಸಿಕ್ಕುವುದೊಂದು ಕಷ್ಟವಲ್ಲ
ಸರಿಯಾದ ಗಂಡೊದಗಿ ಹೆಣ್ಣು ಸುಖವಾಗಿರಲಿ
ತಡವಾದರೆನಂತೆ ನಷ್ಟವಿಲ್ಲ
ಶಾನುಭೋಗರ ಮಗಳು ರತ್ನದಂತಹ ಹುಡುಗಿ
ಗಂಡು ಸಿಕ್ಕುವುದೊಂದು ಕಷ್ಟವಲ್ಲ
ಸರಿಯಾದ ಗಂಡೊದಗಿ ಹೆಣ್ಣು ಸುಖವಾಗಿರಲಿ
ತಡವಾದರೆನಂತೆ ನಷ್ಟವಿಲ್ಲ
ತಡವಾದರೆನಂತೆ ನಷ್ಟವಿಲ್ಲ
ತಡವಾದರೆನಂತೆ ನಷ್ಟವಿಲ್ಲ
No comments:
Post a Comment
Write Something about PK Music