Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

ಬದುಕು ಜಟಕಾಬಂಡಿ - Baduku Jataka Bandi Lyrics - DVG Songs Lyrics - ಬದುಕು ಜಟಕಾಬಂಡಿ ವಿಧಿ ಅದರ ಸಾಹೇಬ

Song: Baduku Jataka Bandi Program: Minchu Singer: Mysore Ananthaswamy Music Director: Mysore Ananthaswamy Lyricist: D V Gundappa Music Label : Lahari Music

ಬದುಕು ಜಟಕಾಬಂಡಿ
ಬದುಕು ಜಟಕಾಬಂಡಿ ವಿಧಿ ಅದರ ಸಾಹೇಬ
ಕುದುರೆ ನೀನ್ ಅವನು ಪೇಳ್ದಂತೆ ಪಯಣಿಗರು
ಕುದುರೆ ನೀನ್ ಅವನು ಪೇಳ್ದಂತೆ ಪಯಣಿಗರು
ಮದುವೆಗೋ ಮಸಣಕೋ ಹೋಗೆಂದಕಡೆಗೋಡು
ಪದ ಕುಸಿಯೆ ನೆಲವಿಹುದು ಮಂಕುತಿಮ್ಮ
ಪದ ಕುಸಿಯೆ ನೆಲವಿಹುದು ಮಂಕುತಿಮ್ಮ
ಪದ ಕುಸಿಯೆ ನೆಲವಿಹುದು ಮಂಕುತಿಮ್ಮ

ಅಕ್ಕಿಯೊಳಗನ್ನವನು ಮೊದಲಾರು ಕಂಡವರು
ಅಕ್ಕಿಯೊಳಗನ್ನವನು ಮೊದಲಾರು ಕಂಡವರು
ಅಕ್ಕರದ ಬರಹಕ್ಕೆ ಮೊದಲಿಗದನಾರು
ಲೆಕ್ಕವಿರಿಸಿಲ್ಲ ಜಗ ತನ್ನಾದಿ ಬಂಧುಗಳ
ಲೆಕ್ಕವಿರಿಸಿಲ್ಲ ಜಗ ತನ್ನಾದಿ ಬಂಧುಗಳ
ದಕ್ಕುವುದೆ ಜಸ ನಿನಗೆ ಮಂಕುತಿಮ್ಮ
ದಕ್ಕುವುದೆ ಜಸ ನಿನಗೆ ಮಂಕುತಿಮ್ಮ
ದಕ್ಕುವುದೆ ಜಸ ನಿನಗೆ ಮಂಕುತಿಮ್ಮ
ದಕ್ಕುವುದೆ ಜಸ ನಿನಗೆ ಮಂಕುತಿಮ್ಮ

ಇಳೆಯಿಂದ ಮೊಳಕೆ ಒಗೆ ಒಂದು ತಮಟೆಗಲಿಲ್ಲ
ಇಳೆಯಿಂದ ಮೊಳಕೆ ಒಗೆ ಒಂದು ತಮಟೆಗಲಿಲ್ಲ
ಫಲ ಮಾಗುವಂದು ತ್ತುತ್ತೂರಿ ದನಿಯಿಲ್ಲ
ಬೆಳಕೀವ ಸೂರ್ಯಚಂದ್ರರದೊಂದು ಸದ್ದಿಲ್ಲ
ಬೆಳಕೀವ ಸೂರ್ಯಚಂದ್ರರದೊಂದು ಸದ್ದಿಲ್ಲ
ಹೊಲಿ ನಿನ್ನ ತುಟಿಗಳನು ಮಂಕುತಿಮ್ಮ
ಹೊಲಿ ನಿನ್ನ ತುಟಿಗಳನು ಮಂಕುತಿಮ್ಮ
ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು……
ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು
ಕಲ್ಲಾಗು ಕಷ್ಟಗಳ ಮಳೆಯ ವಿಧಿ ಸುರಿಯೆ
ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ
ಬೆಲ್ಲ ಸಕ್ಕರೆಯಾಗು ದೀನದುರ್ಬಲರಿಂಗೆ
ಎಲ್ಲರೊಳಗೊಂದಾಗು ಮಂಕುತಿಮ್ಮ
ಎಲ್ಲರೊಳಗೊಂದಾಗು ಮಂಕುತಿಮ್ಮ

ನಗುವು ಸಹಜದ ಧರ್ಮ ನಗಿಸುವುದು ಪರಧರ್ಮ
ನಗುವ ಕೇಳುತ ನಗುವುದತಿಶಯದ ಧರ್ಮ
ನಗುವ ನಗಿಸುವ ನಗಿಸಿ ನಗುತ ಬಾಳುವ ವರವ
ಮಿಗೆ ನೀನು ಬೇಡಿಕೊಳೋ ಮ೦ಕುತಿಮ್ಮ
ಮಿಗೆ ನೀನು ಬೇಡಿಕೊಳೋ ಮ೦ಕುತಿಮ್ಮ
ಮ೦ಕುತಿಮ್ಮ.. ಮ೦ಕುತಿಮ್ಮ.. ಮ೦ಕುತಿಮ್ಮ..






No comments:

Post a Comment

Write Something about PK Music

new1

new2

new5