Song: Hosa Varsha Bandante
Lyrics: N.S LakshmiNarayana Bhatta
Music/Singer: C Ashwath
Lyrics: N.S LakshmiNarayana Bhatta
Music/Singer: C Ashwath
ಹೊಸ ವರ್ಷ ಬಂದಂತೆ ಯಾರು ಬಂದಾರು?
ಗಿಡಮರಕೆ ಹೊಸ ವಸ್ತ್ರ ಯಾರು ತಂದಾರು?
ಹೊಸ ವರ್ಷ ಬಂದಂತೆ ಯಾರು ಬಂದಾರು?
ಗಿಡಮರಕೆ ಹೊಸ ವಸ್ತ್ರ ಯಾರು ತಂದಾರು?
ಹಾಡೆಂದು ಕೋಗಿಲೆಯ ಕೂಗಿ ಕರೆದಾರು?
ಹಾಡೆಂದು ಕೋಗಿಲೆಯ ಕೂಗಿ ಕರೆದಾರು?
ಮಾವಿನ ಚಿಗುರನ್ನು ತಿನಲು ಕೊಟ್ಟಾರು?
ಹೊಸ ವರ್ಷ ಬಂದಂತೆ ಯಾರು ಬಂದಾರು?
ಗಿಡಮರಕೆ ಹೊಸ ವಸ್ತ್ರ ಯಾರು ತಂದಾರು?
ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ
ಹೂಗಳ ಪರೀಕ್ಷೆ ದುಂಬಿಗಳಿಗೆಲ್ಲ
ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ
ಹೂಗಳ ಪರೀಕ್ಷೆ ದುಂಬಿಗಳಿಗೆಲ್ಲ
ಬಂದನೊ ವಸಂತ ಬಂದಿಗಳೆ ಎಲ್ಲ
ಬಂದನೊ ವಸಂತ ಬಂದಿಗಳೆ ಎಲ್ಲ
ಹೊಸ ಬಯಕೆ ಹೊಸ ಆಲೆ ರುಚಿರುಚಿಯ ಬೆಲ್ಲ
ಹೊಸ ವರ್ಷ ಬಂದಂತೆ ಯಾರು ಬಂದಾರು?
ಗಿಡಮರಕೆ ಹೊಸ ವಸ್ತ್ರ ಯಾರು ತಂದಾರು?
ಏನಿದೆಯೊ ಇಲ್ಲವೋ ಆಸೆಯೊಂದುಂಟು
ಬಾನಿನಲಿ ಹೊಸ ಸೂರ್ಯ ಬರುವ ಮಾತುಂಟು
ಏನಿದೆಯೊ ಇಲ್ಲವೋ ಆಸೆಯೊಂದುಂಟು
ಬಾನಿನಲಿ ಹೊಸ ಸೂರ್ಯ ಬರುವ ಮಾತುಂಟು
ಸಂಜೆಯಲಿ ಮಿಂಚಿರಲು ಅಂಚುಗಳ ಬಣ್ಣ
ಸಂಜೆಯಲಿ ಮಿಂಚಿರಲು ಅಂಚುಗಳ ಬಣ್ಣ
ಕಪ್ಪಾದರೂ ಮುಗಿಲು ಜರಿಸೀರೆಯಣ್ಣ
ಹೊಸ ವರ್ಷ ಬಂದಂತೆ ಯಾರು ಬಂದಾರು?
ಗಿಡಮರಕೆ ಹೊಸ ವಸ್ತ್ರ ಯಾರು ತಂದಾರು?
ನೆನಪುಗಳ ಜೋಲಿಯಲಿ ತೂಗುವುದು ಮನಸು
ಕಟ್ಟುವುದು ಮಾಲೆಯಲಿ ಹೊಸ ಹೊಸ ಕನಸು
ನೆನಪುಗಳ ಜೋಲಿಯಲಿ ತೂಗುವುದು ಮನಸು
ಕಟ್ಟುವುದು ಮಾಲೆಯಲಿ ಹೊಸ ಹೊಸ ಕನಸು
ನನಸಾಗದಿದ್ದರೂ ಕನಸಿಗಿದೆ ಘನತೆ
ನನಸಾಗದಿದ್ದರೂ ಕನಸಿಗಿದೆ ಘನತೆ
ತೈಲ ಯಾವುದೆ ಇರಲಿ ಉರಿಯುವುದು ಹಣತೆ
ತೈಲ ಯಾವುದೆ ಇರಲಿ ಉರಿಯುವುದು ಹಣತೆ
ಗಿಡಮರಕೆ ಹೊಸ ವಸ್ತ್ರ ಯಾರು ತಂದಾರು?
ಹೊಸ ವರ್ಷ ಬಂದಂತೆ ಯಾರು ಬಂದಾರು?
ಗಿಡಮರಕೆ ಹೊಸ ವಸ್ತ್ರ ಯಾರು ತಂದಾರು?
ಹಾಡೆಂದು ಕೋಗಿಲೆಯ ಕೂಗಿ ಕರೆದಾರು?
ಮಾವಿನ ಚಿಗುರನ್ನು ತಿನಲು ಕೊಟ್ಟಾರು?
ಹೊಸ ವರ್ಷ ಬಂದಂತೆ ಯಾರು ಬಂದಾರು?
ಗಿಡಮರಕೆ ಹೊಸ ವಸ್ತ್ರ ಯಾರು ತಂದಾರು?
ವಸ್ತ್ರ ಯಾರು ತಂದಾರು?
No comments:
Post a Comment
Write Something about PK Music