Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

ಕುರುಡು ಕಾಂಚಾಣ - Kurudu kanchana Song Lyrics -C Ashwath Songs Lyrics

Song Name: Kurudu Kanchana Kuniyathalithu Album: Mumbaiyiyalli C Ashwath - Live Program Singer: Ravi Murur, Kikkeri Krishnamurthy, Vinay Kumar Music: C Ashwath Lyricist: Da Ra Bendre Music Label : Lahari Music

ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ
ಕುರುಡು ಕಾಂಚಾಣ ಕುರುಡು ಕಾಂಚಾಣ
ಕುರುಡು ಕಾಂಚಾಣ ಕುರುಡು ಕಾಂಚಾಣ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ

ಬಾಣಂತಿಯೆಲುಬ ಸಾ ಬಾಣದ ಬಿಳುಪಿನಾ
ಕಾಣದ ಕಿರುಗೆಜ್ಜಿ ಕಾಲಾಗ ಇತ್ತೋ
ಇತ್ತೋ ಇತ್ತೋ ಇತ್ತೋ ಇತ್ತೋ
ಬಾಣಂತಿಯೆಲುಬ ಸಾ ಬಾಣದ ಬಿಳುಪಿನಾ
ಕಾಣದ ಕಿರುಗೆಜ್ಜಿ ಕಾಲಾಗ ಇತ್ತೋ
ಸಣ್ಣ ಕಂದಮ್ಮಗಳ  ಕಣ್ಣೀನ ಕವಡೀಯ
ತಣ್ಣನ್ನ ಜೋಮಾಲೆ ಕೊರಳೊಳಗಿತ್ತೋ

ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ

ಬಡವರ ಒಡಲಿನ  ಬಡಬಾನಲದಲ್ಲಿ
ಸುಡು ಸುಡು ಪಂಜು ಕೈಯೊಳಗಿತ್ತೋ
ಇತ್ತೋ ಇತ್ತೋ ಇತ್ತೋ ಇತ್ತೋ
ಬಡವರ ಒಡಲಿನ  ಬಡಬಾನಲದಲ್ಲಿ
ಸುಡು ಸುಡು ಪಂಜು ಕೈಯೊಳಗಿತ್ತೋ
ಕಂಬನಿ ಕುಡಿಯುವ ಹುಂಬ ಬಾಯಿಲೆ ಮೈ
ದುಂಬಿಯಂತುಧೋ ಉಧೋ ಎನ್ನುತಲಿತ್ತೋ

ಕುರುಡು ಕಾಂಚಾಣ ಕುರುಡು ಕಾಂಚಾಣ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ

ಕೂಲಿ ಕುಂಬಳಿಯವರ ಪಾಲಿನ ಮೈದೊಗಲ
ಧೂಳಿಯ ಭಂಡಾರ ಹಣೆಯಯೊಳಗಿತ್ತೋ
ಇತ್ತೋ ಇತ್ತೋ ಇತ್ತೋ ಇತ್ತೋ
ಕೂಲಿ ಕುಂಬಳಿಯವರ ಪಾಲಿನ ಮೈದೊಗಲ
ಧೂಳಿಯ ಭಂಡಾರ ಹಣೆಯಯೊಳಗಿತ್ತೋ
ಗುಡಿಯೊಳಗೆ ಗಣಣ, ಮಾ ಹಡಿಯೊಳಗ ತನನ ಅಂ
ಗಡಿಯೊಳಗೆ ಝಣಣಣ ನುಡಿಗೊಡುತಿತ್ತೋ.

ಕುರುಡು ಕಾಂಚಾಣ ಕುರುಡು ಕಾಂಚಾಣ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ

ಹ್ಯಾಂಗಾರೆ ಕುಣಿಕುಣಿದು ಮಂಗಾಟ ನಡೆದಾಗ
ಅಂಗಾತ ಬಿತ್ತೋ ಹೆಗಲಲಿ ಎತ್ತೋ
ಎತ್ತೋ ಎತ್ತೋ ಎತ್ತೋ ಎತ್ತೋ
ಹ್ಯಾಂಗಾರೆ ಕುಣಿಕುಣಿದು ಮಂಗಾಟ ನಡೆದಾಗ
ಅಂಗಾತ ಬಿತ್ತೋ ಹೆಗಲಲಿ ಎತ್ತೋ
ಹ್ಯಾಂಗಾರೆ ಕುಣಿಕುಣಿದು ಮಂಗಾಟ ನಡೆದಾಗ
ಅಂಗಾತ ಬಿತ್ತೋ ಹೆಗಲಲಿ ಎತ್ತೋ

ಕುರುಡು ಕಾಂಚಾಣ ಕುರುಡು ಕಾಂಚಾಣ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ
ಕುರುಡು ಕಾಂಚಾಣ ಕುಣಿಯುತ್ತಲಿತ್ತು
ಕಾಲಿಗೆ ಬಿದ್ದವರ ತುಳಿಯುತ್ತಲಿತ್ತೋ

Kurudu kanchana Song Lyrics
Kurudu kaanchana Song Lyrics
Kurudu kaanchaana Song Lyrics
Kurudu kanchana Lyrics

No comments:

Post a Comment

Write Something about PK Music

new1

new2

new5