Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

ಎಲ್ಲಾರು ಮಾಡುವುದು ಹೊಟ್ಟೆಗಾಗಿ - Ellaaru Maaduvudu Hottegaagi Lyrics - Kanakadaasaru - Bhakthigeethe


Album : Haribhaktisara Song : Ellaru Maduvudu Hottegagi Genu Battegagi Singer : Shri Ananth Kulkarni Lyricist : Shri Kanaka Dasaru Music : -- Type : #KanakaDasaJayanti Label / Banner : Gaanasampada Live Cassettes Marketed by : Gaanasampada Devotional


ಎಲ್ಲಾರು ಮಾಡುವುದು ಹೊಟ್ಟೆಗಾಗಿ

ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ  

ಎಲ್ಲಾರು ಮಾಡುವುದು ಹೊಟ್ಟೆಗಾಗಿ

ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ  

 

ವೇದಶಾಸ್ತ್ರ ಪಂಚಾಂಗವ ಓದಿಕೊಂಡು ಪರರಿಗೆ

ಬೋಧನೆಯ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ        

ಚಂಡಭಟರಾಗಿ ನಡೆದು ಕತ್ತಿ ಡಾಲು ಕೈಲಿ ಹಿಡಿದು

ಖಂಡ ತುಂಡ ಮಾಡುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ 

 

ಎಲ್ಲಾರು ಮಾಡುವುದು ಹೊಟ್ಟೆಗಾಗಿ

ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ  

ಎಲ್ಲಾರು ಮಾಡುವುದು ಹೊಟ್ಟೆಗಾಗಿ

ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ

 

ಬೆಲ್ಲದಂತೆ ಮಾತನಾಡಿ ಎಲ್ಲರನ್ನು ಮರುಳುಮಾಡಿ

ಸುಳ್ಳು ಬೊಗಳಿ ತಿಂಬುವುದು ಹೊಟ್ಟೆಗಾಗಿ...      

ಸನ್ಯಾಸಿ ಜಂಗಮ ಜೋಗಿ ಜಟ್ಟಿ ಮೊಂಡ ಬೈರಾಗಿ

ನಾನ ವೇಷ ಹಾಕುವುದು ಹೊಟ್ಟೆಗಾಗಿ ಗೇಣುಬಟ್ಟೆಗಾಗಿ

 

ಎಲ್ಲಾರು ಮಾಡುವುದು ಹೊಟ್ಟೆಗಾಗಿ

ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ  

ಎಲ್ಲಾರು ಮಾಡುವುದು ಹೊಟ್ಟೆಗಾಗಿ

ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ  

 

ಅಂದಣ  ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿ

ಚಂದದಿಂದ ಮೆರೆಯುವುದು ಹೊಟ್ಟೆಗಾಗಿ         

ಅಂದಣ  ಪಲ್ಲಕ್ಕಿ ಏರಿ ಮಂದಿ ಮಾರ್ಬಲ ಕೂಡಿ

ಚಂದದಿಂದ ಮೆರೆಯುವುದು ಹೊಟ್ಟೆಗಾಗಿ

ಉನ್ನತ ಕಾಗಿನೆಲೆಯಾದಿ ಕೇಶವನಾ ದ್ಯಾನವನ್ನು

ಮನಮುಟ್ಟಿ ಮಾಡುವುದು ಮುಕ್ತಿಗಾಗಿ ಆನಂದಕಾಗಿ

 


Ellaru Maduvudu Hottegagi Lyrics

Yellaaru Maaduvudu Hottegaagi Lyrics

Yellaru Maaduvudu Hottegaagi Genu battegaagi Lyrics

No comments:

Post a Comment

Write Something about PK Music

new1

new2

new5