Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ - Hendathiyobbalu Maneyolagiddare Lyrics - K S Narasimhaswamy - Mysore Ananthaswamy


Lyrics : K S Narasimhaswamy

Music/Singer: Raju Ananthaswamy


ಹೆಂಡತಿಯೊಬ್ಬಳು

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೆ ಕೋಟಿ ರುಪಾಯಿ

ಹೆಂಡತಿಯೊಬ್ಬಳು ಹತ್ತಿರವಿದ್ದರೆ ನಾನೂ ಒಬ್ಬ ಸಿಪಾಯಿ

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೆ ಕೋಟಿ ರುಪಾಯಿ

ಹೆಂಡತಿಯೊಬ್ಬಳು ಹತ್ತಿರವಿದ್ದರೆ ನಾನೂ ಒಬ್ಬ ಸಿಪಾಯಿ

ಹೆಂಡತಿಯೊಬ್ಬಳು

 

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ಹುಣ್ಣಿಮೆ ಹೋಳಿಗೆ ದೀಪ

ಹೆಂಡತಿ ತವರಿಗೆ ಹೊರಡುವೆನೆಂದರೆ ನನಗಿಲ್ಲದ ಕೋಪ

ಕೈ ಹಿಡಿದವಳು ಕೈ ಬಿಡದವಳು ಮಾಡಿದಡಿಗೆಯೇ ಚಂದ

ನಾಗರ ಕುಚ್ಚಿನ ನಿಡುಜಡೆಯವಳು ಈಕೆ ಬಂದುದೆಲ್ಲಿಂದ

ಹೆಂಡತಿಯೊಬ್ಬಳು

 

ಕಬ್ಬಿಗನೂರಿನ ಅರಮನೆಯಿಂದ ಕನಸೇ ಇರಬೇಕು

ಅಲ್ಲಿಯ ದೊರೆತನ ಸಿಗುವಂತಿದ್ದರೆ ನನಗೇ ಸಿಗಬೇಕು

ತಾರೆಯ ಬೆಳಕಿನ ತುಂಬಿದ ಸಭೆಯಲಿ ಸುಂದರಿ ಮೆರೆದಾಳು

ನನ್ನೊಡನವಳು ಸಿಂಹಾಸನದಲಿ ಮೆಲ್ಲನೆ ನಕ್ಕಾಳು

ಹೆಂಡತಿಯೊಬ್ಬಳು

 

ಚಂದಿರನೂರಿನ ಅರಮನೆಯಿಂದ ಬಂದವರೀಗೆಲ್ಲಿ

ಬೆಳ್ಳಿಯ ಕೋಟೆಯ ಬಾಗಿಲಿನಿಂದ ಬಂದವರೀಗೆಲ್ಲಿ

ಹೆಂಡತಿಯೊಂದಿಗೆ ಬಡತನ ದೊರೆತನ

ಹೆಂಡತಿಯೊಂದಿಗೆ ಬಡತನ ದೊರೆತನ ಏನೂ ಭಯವಿಲ್ಲ

ಹೆಂಡತಿಯೊಲುಮೆಯ ಭಾಗ್ಯವನರಿಯದ ಗಂಡಿಗೆ ಜಯವಿಲ್ಲ

 

ಭರಣಿಯ ತೆರೆದರೆ ಅರಿಶಿನ ಕುಂಕುಮ ಅವಳದು ಈ ಸಂಪತ್ತು

ತುಟಿಗಳ ತೆರೆದರೆ ತುಳುಕುವುದಿ೦ಪಿನ ಎರಡೋ ಮೂರೋ ಮುತ್ತು

 

ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದೆ ಕೋಟಿ ರುಪಾಯಿ

ಹೆಂಡತಿಯೊಬ್ಬಳು ಹತ್ತಿರವಿದ್ದರೆ ನಾನೂ ಒಬ್ಬ ಸಿಪಾಯಿ

ಹೆಂಡತಿಯೊಬ್ಬಳು



Hendatiyobbalu Mane olagiddare Lyrics 

Hendathiyobbalu Lyrics  

No comments:

Post a Comment

Write Something about PK Music

new1

new2

new5