Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

ಅನುದಿನ ನಿನ್ನ ನೆನೆದು - Anudina Ninna Nenadu Lyrics in Kannada - Purandara daasaru - Narasimha Nayak


Song: Anudina Ninna Nenadu Album/Movie: Dasarendare Purandara Dasarayya Vol-II Singer: Narasimha Nayak Music Director: Narasimha Nayak Lyricist: Purandara Daasaru Music Label : Lahari Music


ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

ದುಃಖ ಸುಖ ಲೆಕ್ಕಿಸದೆ ಮುಖ್ಯ ಫಲ ಮುಂದರಿಸೆ

ದುಃಖ ಸುಖ ಲೆಕ್ಕಿಸದೆ ಮುಖ್ಯ ಫಲ ಮುಂದರಿಸೆ

ಮಿಕ್ಕುತ್ತ ಸೊಕ್ಕಿ ಮೋಹಕ್ಕೆ ಸಿಕ್ಕದೆ

ಮಿಕ್ಕುತ್ತ ಸೊಕ್ಕಿ ಮೋಹಕ್ಕೆ ಸಿಕ್ಕದೆ

ಮನವು ನಿನ್ನಲಿ ನಿಲ್ಲಲಿ

ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

ಅನುದಿನ ಅನುದಿನ ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

 

ನಿನ್ನ ಗುಣ ವರ್ಣಿಸುತ ನಿನ್ನವರ ಮನ್ನಿಸುತ

ನಿನ್ನ ಗುಣ ವರ್ಣಿಸುತ ನಿನ್ನವರ ಮನ್ನಿಸುತ

ನಿನ್ನ ಪಾವನ್ನ ಲಾವಣ್ಯ ಧ್ಯಾನಿಸೆ

ಮನ ನಿನ್ನ ಪಾವನ್ನ ಲಾವಣ್ಯ ಧ್ಯಾನಿಸೆ

 

ಮನವು ನಿನ್ನಲಿ ನಿಲ್ಲಲಿ

ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

 

ಸಂತೋಷ ನಿರಂತರವು ಸಂತ ಜನ ಸಹವಾಸವು

ಸಂತೋಷ ನಿರಂತರವು ಸಂತ ಜನ ಸಹವಾಸವು

ಶಾಂತತ್ವವಾಂತು ಮಹಾಂತಧೈರ್ಯದಿ

ಮನ ಶಾಂತತ್ವವಾಂತು ಮಹಾಂತಧೈರ್ಯದಿ

ಮನವು ನಿನ್ನಲಿ ನಿಲ್ಲಲಿ

ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

 

ಭಕ್ತಿ ಸುವಿರಕ್ತಿ ಜ್ಞಾನ ಮುಕ್ತಿಗೆ ಮುಖ್ಯ ಕಾರಣ

ಭಕ್ತಿ ಸುವಿರಕ್ತಿ ಜ್ಞಾನ ಮುಕ್ತಿಗೆ ಮುಖ್ಯ ಕಾರಣ

ಚಿತ್ತದೊಳಿತ್ತೆಲ್ಲ ಹೊತ್ತು ಹೊತ್ತಿಗೆ

ಮನ ಚಿತ್ತದೊಳಿತ್ತೆಲ್ಲ ಹೊತ್ತು ಹೊತ್ತಿಗೆ

 

ಮನವು ನಿನ್ನಲಿ ನಿಲ್ಲಲಿ

ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

 

ಪ್ರಿಯ ಶ್ರೀಲಕ್ಷುಮಿನಾರಾಯಣ ಪರಾಯಣನು...

ಆಆಆಆಆಆಆಆ

ಪ್ರಿಯ ಶ್ರೀಲಕ್ಷುಮಿನಾರಾಯಣ ಪರಾಯಣನು

ಧೈರ್ಯ ದಂತರ್ಯ ಗಾಂಭೀರ್ಯ ಭಾವದಿ

ಮನ ಧೈರ್ಯ ದಂತರ್ಯ ಗಾಂಭೀರ್ಯ ಭಾವದಿ

ಮನವು ನಿನ್ನಲಿ ನಿಲ್ಲಲಿ

ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

ಅನುದಿನ ಅನುದಿನ ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

ಅನುದಿನ ನಿನ್ನ ನೆನೆದು ಮನವು ನಿನ್ನಲಿ ನಿಲ್ಲಲಿ

 

 


No comments:

Post a Comment

Write Something about PK Music

new1

new2

new5