Kannada Songs Lyrics, Bhavageethegalu, Bhakthigeethegalu, Janapadageethegalu

PK MUSIC

Download

adst

Search This Blog

ಒಂದೇ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ರಕ್ಷಿತ್ ಶೆಟ್ಟಿ-ರಶ್ಮಿಕಾ ಮಂದಣ್ಣ


ಹಲವು ದಿನಗಳ ಬಳಿ ರಶ್ಮಿಕಾ ಮಂದಣ್ಣ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮಿಬ್ಬರ ನಡುವೆ ಮನಸ್ತಾಪ ಬಂದ ಕಾರಣ ಕೆಲವು ತಿಂಗಳು ರಶ್ಮಿಕಾ ಮತ್ತು ರಕ್ಷಿತ್ ಶೆಟ್ಟಿ ಜೊತೆಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಈ ಇಬ್ಬರೂ ಒಂದೇ ಕಾರ್ಯಕ್ರಮದಲ್ಲಿ ಕಾಣಿಸಿದ್ದಾರೆ.

ಈ ಬಾರಿಯ ಸೈಮಾ ಕಾರ್ಯಕ್ರಮದಲ್ಲಿ ರಕ್ಷಿತ್​ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ಅಲ್ಲದೆ ‘ಯಜಮಾನ’ ಹಾಗೂ ‘ಡಿಯರ್​ ಕಾಮ್ರೇಡ್​​’ ಚಿತ್ರಗಳ ನಟನೆಗಾಗಿ ರಶ್ಮಿಕಾ ಮಂದಣ್ಣ ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಸಿಕ್ಕಿದೆ. ಸೈಮಾ ಕಾರ್ಯಕ್ರಮ ಶನಿವಾರ ರಾತ್ರಿ ನಡೆದಿದ್ದು, ಕಾರ್ಯಕ್ರಮದಲ್ಲಿ ರಕ್ಷಿತ್ ಮತ್ತು ರಕ್ಮಿಕಾ ಕಾಣಿಸಿಕೊಂಡಿದ್ದಾರೆ.

ಕಾರ್ಯಕ್ರಮ ಹೈದರಾಬಾದ್ ​ನಲ್ಲಿ ನಡೆದಿದ್ದು, ರಕ್ಷಿತ್ ಶೆಟ್ಟಿ ನಟನೆಯ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾಕ್ಕೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದಿದ್ದಾರೆ.

No comments:

Post a Comment

Write Something about PK Music

new1

new2

new5